ಬೆಂಗಳೂರು : ಇಸ್ರೇಲ್ ದೇಶದ ಪೆಗಾಸಸ್ ಸ್ಪೈವೇರ್‌ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾನು ಸೇರಿದಂತೆ ಪ್ರಮುಖರ ಮೊಬೈಲ್ ಕರೆಗಳನ್ನು ಕದ್ದಾಲಿಕೆ ಆಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್‌ ಮೂಲಕ ಸ್ವತಃ ಕೇಂದ್ರ ಸರಕಾರದ ಸಚಿವ ಸಂಪುಟ ಸದಸ್ಯರ ಮೊಬೈಲ್ ಕರೆಗಳನ್ನು ಕದ್ದಾಲಿಕೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈಗ ತಮ್ಮ ಮೊಬೈಲ್ ಕರೆ ಮಾತ್ರವಲ್ಲದೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಯಾರೂ ಕೇಂದ್ರ ಸರಕಾರದ ವಿರುದ್ಧ ಮಾತನಾಡುತ್ತಾರೆ, ಟೀಕಿಸುತ್ತಾರೆ ಅವರ ಮೊಬೈಲ್ ಕರೆಗಳನ್ನು ಕದ್ದಾಲಿಕೆ ಆಗುತ್ತಿವೆ ಎಂದು ಆರೋಪಿಸಿದರು.

ಇದು ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಬಳಸಲಾಗುವ ‘ಗುಜರಾತ್ ಮಾದರಿ” ಎಂದೇ ಹೇಳಬಹುದು. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರಕಾರ ಯಾವುದೇ ಸಾಧನೆ ಮಾಡಿಲ್ಲ ಎಂದು ಸಚಿವರು ದೂರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಮೀರ್ ದಳಸನೂರು\ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.