×
Ad

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರ | ಹೈಕೋರ್ಟ್‌ನಲ್ಲಿ ಕೇವಿಯೆಟ್ ಸಲ್ಲಿಕೆ

Update: 2024-08-17 15:39 IST
ಸಿಎಂ ಸಿದ್ದರಾಮಯ್ಯ(PTI)

ಬೆಂಗಳೂರು : ಮೈಸೂರಿನ ಮುಡಾದಲ್ಲಿ ಸಿಎಂ ಪತ್ನಿಗೆ 14 ಸೈಟ್ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೆನ್ನಲ್ಲೇ ಹೈಕೋರ್ಟ್‌ಗೆ ಕೇವಿಯೆಟ್ ಸಲ್ಲಿಕೆಯಾಗಿದೆ.

ಈ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಶನಿವಾರ ಕೇವಿಯೆಟ್ ಸಲ್ಲಿಸಿದ್ದಾರೆ. ರಾಜ್ಯಪಾಲರು ಸಿಎಂ ವಿರುದ್ಧದ ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರೆ, ನಮ್ಮ ವಾದ ಆಲಿಸದೆ ಯಾವುದೇ ಆದೇಶ ನೀಡಬಾರದು ಎಂದು ಕೆವಿಯಟ್‌ನಲ್ಲಿ ಮನವಿ ಮಾಡಿದ್ದಾರೆ.

ಈಗಾಗಲೇ ಮುಡಾ ಹಗರಣವನ್ನು ತನಿಖೆಗೆ ಒಳಪಡಿಸಲು ಆದೇಶಿಸಬೇಕು ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರುವೊಂದನ್ನು ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News