×
Ad

ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವುದು ಸರಿಯಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ

Update: 2024-01-13 15:02 IST

ಬೆಂಗಳೂರು:  ರಾಜ್ಯದಲ್ಲಿ ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಸರ್ಕಾರದ ಮೇಲೆ ಅನಾವಶ್ಯಕವಾಗಿ ಸುಳ್ಳು ಆರೋಪಗಳನ್ನು ಹೊರಿಸುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿರ್ಭಯಾ ಯೋಜನೆಯಡಿ ಮಹಿಳಾ ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಹಾವೇರಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ‌. ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ‌. ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖೆ ಇನ್ನು ಪೂರ್ಣಗೊಂಡಿಲ್ಲ. ಅದಕ್ಕೂ ಮೊದಲೇ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News