×
Ad

ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸ್ವಪಕ್ಷದವರೇ ಯತ್ನಿಸಿದ್ದರು: ಶಾಸಕ ಶಿವರಾಮ ಹೆಬ್ಬಾರ್

Update: 2023-08-19 11:11 IST

ಶಿವರಾಮ ಹೆಬ್ಬಾರ್ (twitter@ShivaramHebbar)

ಉತ್ತರ ಕನ್ನಡ, ಆ.19: ಕಳೆದ ವಿಧಾನಸಭೆ ಚುನಾವಣೆ ವೇಳೆ ತನ್ನನ್ನು ಸೋಲಿಸಲು ಸ್ವಪಕ್ಷದ ಕೆಲ ಸ್ಥಳೀಯ ಮುಖಂಡರು ಪ್ರಯತ್ನಿಸಿದ್ದರು. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪಕ್ಷದ ಹಿರಿಯ ನಾಯಕರಿಗೆ ಪತ್ರ ಬರೆದಿದ್ದೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇಂತಹ ತಪ್ಪು ಮರುಕಳಿಸಬಾರದು. ಆ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ. ಪಕ್ಷದ ನಿರ್ಣಯಕ್ಕಾಗಿ ಕಾಯುತ್ತಿದ್ದೇನೆ ಎಂದು ಎಂದು ಹೇಳಿದರು.

ಪಕ್ಷದ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರಿಂದ ತನಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಸ್ಥಳೀಯ ಮುಖಂಡರು ನನ್ನ ಪರ ಕೆಲಸ ಮಾಡದಿರುವ ಬಗ್ಗೆ ನೋವಿದೆ ಎಂದು ಹೇಳಿರುವ ಹೆಬ್ಬಾರ್, ರಾಜಕೀಯವಾಗಿ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆದಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News