×
Ad

ಜ. 21 ರಂದು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್

Update: 2024-01-15 15:39 IST

ಬೆಂಗಳೂರು: "ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಹಾಗೂ ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು "ಜ. 19 ರಂದು ನಡೆಯುವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ನಡೆಸಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ" ಎಂದರು.

ಇದೇ ತಿಂಗಳು 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News