×
Ad

ಬೃಹತ್ ಕೈಗಾರಿಕೆ, ಉಕ್ಕು ಖಾತೆ ಪಡೆದ ಬೆನ್ನಲ್ಲೇ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...

Update: 2024-06-10 23:05 IST

ಎಚ್‌.ಡಿ. ಕುಮಾರಸ್ವಾಮಿ (PTI)

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ರವಿವಾರ ಪ್ರಮಾನ ವಚನ ಸ್ವೀಕರಿಸಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಸಂಸದ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ನೀಡಲಾಗಿದೆ.

ಖಾತೆ ಪಡೆದ ಬೆನ್ನಲ್ಲೇ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, "ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು" ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್‌ ಪಕ್ಷವೂ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News