×
Ad

' ಸಿದ್ದಾಪರಾದ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ: ಎಚ್‌ ಡಿ ಕುಮಾರಸ್ವಾಮಿ

Update: 2024-09-27 10:29 IST

PC: fb.com

ಬೆಂಗಳೂರು: ' ಸಿದ್ದಾಪರಾದ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಿಬಿಐ ತನಿಖೆಗೆ ಮುಕ್ತ ಅವಕಾಶ ನೀಡುವ ಅಧಿಸೂಚನೆಯನ್ನು ರಾಜ್ಯ ಸರಕಾರ ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯ ನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ ಎಂದು ಲೇವಡಿ ಮಾಡಿದ್ದಾರೆ.  

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News