ಕೆ-ಸೆಟ್-25 : ತಾತ್ಕಾಲಿಕ ಫಲಿತಾಂಶ ಪ್ರಕಟ
Update: 2025-11-15 18:44 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.
ಪರೀಕ್ಷೆ ನಡೆದು ದಾಖಲೆಯ ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಲಾಗಿದೆ. ಫಲಿತಾಂಶ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.