ಕೆ-ಸೆಟ್ ಪರೀಕ್ಷೆ : ಕೀ ಉತ್ತರ ಪ್ರಕಟ
Update: 2025-11-04 20:16 IST
ಸಾಂದರ್ಭಿಕ ಚಿತ್ರ | PC : freepik.com
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನ.2ರಂದು ನಡೆದಿದ್ದು, ಪರೀಕ್ಷೆಯ ಕೀ ಉತ್ತರಗಳನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಮಂಗಳವಾರ ಪ್ರಕಟನೆ ಹೊರಡಿಸಿರುವ ಅವರು, ಈ ಉತ್ತರಗಳಿಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ನ.6ರಂದು ಮಧ್ಯಾಹ್ನ 3 ಗಂಟೆ ಒಳಗೆ ವೆಬ್ ಸೈಟ್ ನಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅಪ್ ಲೋಡ್ ಮಾಡಬಹುದು ಎಂದು ತಿಳಿಸಿದ್ದಾರೆ.
ಎಲ್ಲ 33 ವಿಷಯ ಹಾಗೂ ಒಂದು ಸಾಮಾನ್ಯ ಅಧ್ಯಯನದ ಪತ್ರಿಕೆಗಳ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಪ್ರತಿಯೊಂದು ಆಕ್ಷೇಪಣೆಗೂ 50 ರೂ. ಪಾವತಿಸಬೇಕು. ವಿವರಗಳಿಗೆ ವೆಬ್ ಸೈಟ್ ನೋಡಿ ಎಂದು ಅವರು ಸಲಹೆ ನೀಡಿದ್ದಾರೆ.