ಜನವರಿ 13ಕ್ಕೆ ಕೆ-ಸೆಟ್ ಪರೀಕ್ಷೆ ನಿಗದಿ
Update: 2023-12-13 19:56 IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಲುವಾಗಿ ನಡೆಸುವ ಅರ್ಹತಾ ಪರೀಕ್ಷೆಯನ್ನು(ಕೆ-ಸೆಟ್) ಡಿ.31ರ ಬದಲಿಗೆ ಜ.13ರಂದು ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದಲ್ಲದೆ, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳನ್ನು ತಮ್ಮ ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಾಗುತ್ತದೆ.
ಧಾರವಾಡ ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿಯಾಗಿ ಹಾವೇರಿ ಮತ್ತು ಮೈಸೂರು ಜಿಲ್ಲಾ ಕೇಂದ್ರಗಳಿಗೆ ಮಂಡ್ಯ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗಿದೆ. ಇವು ಬಿಟ್ಟು ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.