×
Ad

ಕಡೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಮೃತ್ಯು

Update: 2023-11-27 10:45 IST

ಚಿಕ್ಕಮಗಳೂರು, ನ.27: ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.

ಮೃತನನ್ನು ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಅಭಿಷೇಕ್ ತನಗೆ ಸೇರಿದ್ದ ತೋಟದಲ್ಲಿ ರವಿವಾರ ಸಂಜೆ ತೆಂಗಿನಕಾಯಿ ಕೀಳಲು ಹೋಗಿದ್ದರು. ಈ ವೇಳೆ ತೆಂಗು ಏರಲು ಕೊಂಡೊಯ್ದಿದ್ದ ಅಲ್ಯೂಮಿನಿಯಂ ಏಣಿಯನ್ನು ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಎತ್ತಿಕೊಂಡು ಹೋಗುತ್ತಿದ್ದ ವೇಳೆ ಅಲ್ಲೇ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ತಗುಲಿದೆ ಎನ್ನಲಾಗಿದೆ. ಇದರಿಂದ ವಿದ್ಯುತ್ ಆಘಾತಕ್ಕೆ ಒಳಗಾದ ಅಭಿಷೇಕ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News