×
Ad

ಕಲಬುರಗಿ: ಶಾಲಾ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ವಿದ್ಯಾರ್ಥಿನಿ ಮೃತ್ಯು

Update: 2023-11-19 12:20 IST

ಕಲಬುರಗಿ, ನ.19: ಅಫ್ಝಲಪುರ ತಾಲೂಕಿನ ಚಿಣಮಗೇರ ಗ್ರಾಮದ ಸರಕಾರಿ ಶಾಲೆಯಲ್ಲಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮಹಾಂತಮ್ಮ(8) ಇಂದು ಮುಂಜಾನೆ ಮೃತಪಟ್ಟಿದ್ದಾಳೆ.

ತಾಲೂಕಿನ ಚಿಣಮಗೇರ ಗ್ರಾಮದ ಸರಕಾರಿ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಮಹಾಂತಮ್ಮ ನ.16ರಂದು ಬಿಸಿಯೂಟ ತಯಾರಿಸುವ ಸಾಂಬಾರು ಪಾತ್ರೆಗೆ ಬಿದ್ದಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಮಹಾಂತಮ್ಮಳನ್ನು ಕಲಬುರಗಿಯ ಜಿಮ್ಸ್ ಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಹಾಂತಮ್ಮ ಇಂದು ಮುಂಜಾನೆ 3:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ.

ಈ ಪ್ರಕರಣದಲ್ಲಿ ಈಗಾಗಲೇ ಶಾಲೆಯ ಮುಖ್ಯ ಶಿಕ್ಷಕ, ಸಹ ಶಿಕ್ಷಕ ಹಾಗೂ ಅಡುಗೆ ಮುಖಸ್ಥರನ್ನು ಡಿಡಿಪಿಐ ಮತ್ತು ತಾಲೂಕು ಪಂಚಾಯತ್ ಇಓ ಅಮಾನತು ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News