×
Ad

‌ಕಲಬುರಗಿ: ಕಾಂಗ್ರೆಸ್‌ ಮುಖಂಡನ ಮನೆ ಮೇಲೆ ಈಡಿ ದಾಳಿ

Update: 2023-10-19 15:15 IST

ಕಲಬುರಗಿ: ಕಾಂಗ್ರೆಸ್‌ ಮುಖಂಡ ಬಾಬುರಾವ್ ಪಾಟೀಲ್ ಅವರ ಮನೆ ಮೇಲೆ ಹೈದರಾಬಾದ್ ಜಾರಿ ನಿರ್ದೇಶನಾಲಯದ (ಈಡಿ) ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಈಡಿಯ ನಾಲ್ವರು ಅಧಿಕಾರಿಗಳ ತಂಡ ಹಾಗೂ ನಾಲ್ಕು ಜನ ಕೇಂದ್ರೀಯ ಮೀಸಲು ಪಡೆಯ ನಾಲ್ವರು ಯೋಧರ ನೆತೃತ್ವದಲ್ಲಿ ದಾಳಿ ನಡೆಸಿದ್ದು, ಚಿಂಚೋಳಿ ಶುಗರ್ಸ್ ಅಂಡ್ ಬಯೋ ಇಂಡಸ್ಟ್ರೀಸ್ ಸಂಬಂಧಿಸಿದ ದಾಖಲೆ ಪರಿಶೀಲನೆ ನಡೆಸಿದ್ದಾರೆ ಎಂದು ಕರ್ನಾಟಕ ಪೊಲೀಸ್ ಮೂಲಗಳು ತಿಳಿಸಿವೆ.

ನೆರೆ ರಾಜ್ಯದ ನೋಂದಣಿ ಹೊಂದಿರುವ ಖಾಸಗಿ ಇನ್ನೋವಾ ಕಾರುಗಳಲ್ಲಿ ಬಂದ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದು, ಯಾರನ್ನೂ ಒಳಗಡೆ ಬಿಡುತ್ತಿಲ್ಲ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದು ಡಿವೈಎಸ್ಪಿ ಕೆ. ಬಸವರಾಜ, ಸಿಪಿಐ ಅಂಬಾರಾಯ ಕಮಾನಮನಿ, ಪಿಎಸ್ಐ.ಎ.ಎಸ್ ಪಟೇಲ್ ಮೊದಲಾದವರು ಸ್ಥಳಕ್ಕೆ ಧಾವಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News