×
Ad

ಕಲಬುರಗಿ: ತರಬೇತಿ ನಿರತ ವಿಮಾನ ಜಮೀನಿನಲ್ಲಿ ತುರ್ತು ಭೂಸ್ಪರ್ಶ

Update: 2023-06-25 16:55 IST

ಕಲಬುರಗಿ: ತರಬೇತಿ ವಿಮಾನವೊಂದು ಹಾರಾಟದ ವೇಳೆ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ವಿಮಾನವನ್ನು ರೈತರ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ರವಿವಾರ ಬೆಳಗ್ಗೆ ವರದಿಯಾಗಿದೆ.

ಜಿಲ್ಲೆಯ ಚಿತಾಪುರ ತಾಲೂಕಿನ ಪೆಟ್ ಶಿರೂರ್ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ವಿಮಾನ ನಿಲ್ದಾಣದಿಂದ 15 ಕಿಮೀ ಹಾರಾಟದ ಬಳಿಕ ವಿಮಾನದಲ್ಲಿ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನಲೆ ಕೂಡಲೇ ಪಕ್ಕದ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.  ಅದೃಷ್ಟವಶಾತ್ ಪೈಲಟ್ ಹಾಗೂ ತರಬೇತಿ ನಿರತ ಅಭ್ಯರ್ಥಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. 

ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News