×
Ad

ಕಲಬುರಗಿ: ದೇಹಕ್ಕೆ ಕೀಟನಾಶಕ ತಗುಲಿ ರೈತ ಸಾವು

Update: 2023-09-18 21:14 IST

ಅಂಬ್ರೇಶ ಮೇಲಪ್ಪನೋರ

ಕಲಬುರಗಿ: ಬೆಳೆಗಳಿಗೆ ಕೀಟನಾಶಕ ಸಿಂಪರಣೆ ಮಾಡುವ ವೇಳೆ ಕೀಟನಾಶಕ ತಗುಲಿ ಯುವ ರೈತನೋರ್ವ ಮೃತಪಟ್ಟ ಘಟನೆ ಸೋಮವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರ್ಕಸ್ ಪೇಟೆ ಗ್ರಾಮದಲ್ಲಿ ವರದಿಯಾಗಿದೆ. 

ಅಂಬ್ರೇಶ ಮೇಲಪ್ಪನೋರ (26) ಮೃತ ರೈತ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿರುವ ತನ್ನ ಸ್ವಂತ 3 ಎರಕೆ ಜಮೀನಿನಲ್ಲಿ ಬೆಳೆಯಲಾದ ಹತ್ತಿ ಬೆಳೆಗೆ ಕ್ರಿಮಿನಾಶಕ ತೈಲ ಸಿಂಪಡಣೆ ಮಾಡುತಿದ್ದರು ಎನ್ನಲಾಗಿದ್ದು, ವಿಷಕಾರಿ ತೈಲ ಉಸಿರಾಟದ ಮೂಲಕ ದೇಹ ಸೇರಿ ರೈತ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಕೊಲ್ಲೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಯಾದಗಿರಿ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದಾರೆ. ಅರೊಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಮತ್ತೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. 

ಮೃತ ರೈತನಿಗೆ ವರ್ಷದ ಹಿಂದೆ ಮದುವೆಯಾಗಿದ್ದು, ರೈತನ ಸಾವಿಗೆ ಪರಿಹಾರ ನೀಡುವ ಮೂಲಕ ಸರ್ಕಾರ ನೆರವಿಗೆ ಬರಬೇಕು ಎಂದು ರೈತ ಮುಖಂಡ ನಾಗರೆಡ್ಡಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News