ಕಲಬುರಗಿ: ಶಾಸಕ ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ
Update: 2023-08-24 11:00 IST
ಕಲಬುರಗಿ: ಜೇವರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ, ಕೆಕೆಆರ್.ಡಿಬಿ ಅಧ್ಯಕ್ಷರಾಗಿರುವ ಡಾ. ಅಜಯಸಿಂಗ್ ಅವರ ನಿವಾಸದ ಆವರಣದಲ್ಲಿ ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ.
ಕಲಬುರಗಿಯ ಶರಣ ನಗರ ಬಡಾವಣೆಯಲ್ಲಿರುವ ಶಾಸಕರ ಮೆನೆಯ ಆವರಣದಲ್ಲಿ ಈ ಘಟನೆ ನಡೆದಿದೆ. ಪಟ್ಟಣಾ ಗ್ರಾಮದ ನಿವಾಸಿ ದೇವಪ್ಪ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದುಬಂದಿದೆ.
ಶಾಸಕ ಅಜಯ್ ಸಿಂಗ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ದೇವಪ್ಪ ಅವರ ಪತ್ನಿ ಮೂರು ವರ್ಷದ ಹಿಂದೆ ಮೃತಪಟ್ಟಿದ್ದರೆನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಪುರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿ ಆತ್ಮಹತ್ಯೆ ಕಾರಣ ಎನೆಂಬುದು ಪತ್ತೆ ಹಚ್ಚುತ್ತಿದ್ದಾರೆ.