×
Ad

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ; ಕಲಬುರಗಿಯಲ್ಲಿ ಮುಖ್ಯಮಂತ್ರಿ ಧ್ವಜಾರೋಹಣ

Update: 2023-09-11 23:04 IST

ಬೆಂಗಳೂರು: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಸೆ.17ರಂದು ಕಲಬುರಗಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಅದೇ ರೀತಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್(ರಾಯಚೂರು), ಯುವಜನ ಸೇವೆಗಳ ಸಚಿವ ಬಿ.ನಾಗೇಂದ್ರ(ಬಳ್ಳಾರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ(ಕೊಪ್ಪಳ), ಅರಣ್ಯ ಸಚಿವ ಈಶ್ವರ್ ಖಂಡ್ರೆ(ಬೀದರ್), ಸಣ್ಣ ಕೈಗಾರಿಕೆ ಸಚಿವ ಶರಣ ಬಸಪ್ಪ ದರ್ಶನಾಪುರ್(ಯಾದಗಿರಿ) ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಅವರನ್ನು ವಿಜಯನಗರ ಜಿಲ್ಲೆಯಲ್ಲಿ ಧ್ಜಜಾರೋಹಣ ನೆರವೇರಿಸಲು ನೇಮಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News