ನ.1ರ ರವಿವಾರ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ: ರಾಜ್ಯದ ಎಲ್ಲ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ
ಸಾಂದರ್ಭಿಕ ಚಿತ್ರ
ಬೆಂಗಳೂರು : 2026-27ನೇ ಸಾಲಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.
ರಾಷ್ಟ್ರೀಯ ಹಬ್ಬಗಳು ಹಾಗೂ ನಾಡಹಬ್ಬವಾದ ಕನ್ನಡ ರಾಜ್ಯೋತ್ಸವ ಮತ್ತು ಇತರೆ ಪ್ರಮುಖ ಜಯಂತಿಗಳನ್ನು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ನಿಯಮಾನುಸಾರ ಕಡ್ಡಾಯವಾಗಿ ಆಯಾ ದಿನಗಳಂದು ಆಚರಣೆ ಮಾಡಬೇಕು ಎಂದು ಉಲ್ಲೇಖಿಸಲಾಗಿದೆ.
ನವೆಂಬರ್ 1ರ ರವಿವಾರದಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಕಡ್ಡಾಯವಾಗಿ ಹಾಗೂ ಗೌರವ ಪೂರ್ವಕವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ಇಲಾಖೆಯ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಹಾಗೂ ಎಲ್ಲ ಮುಖ್ಯ ಶಿಕ್ಷಕರುಗಳಿಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.