ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಸಿಎಂಗೆ ಕರವೇ ಮನವಿ
Update: 2025-08-15 20:24 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆ.15 : ಶಿಕ್ಷಣ ತಜ್ಞ ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗದ ಅಂತಿಮ ವರದಿಯನ್ನು ಅನುಷ್ಠಾಗೊಳಿಸಿ, ಕರ್ನಾಟಕದ ಎಲ್ಲ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ತಮಗೆ ಇತ್ತೀಚಿಗೆ ಸಲ್ಲಿಸಿದ್ದು, ಈ ವರದಿಯಲ್ಲಿ ಕರ್ನಾಟಕದ ಎಲ್ಲ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಅನುಷ್ಠಾನಗೊಳಿಸಬೇಕೆಂದು ಶಿಫಾರಸು ಮಾಡಿದೆ ಅದರಂತೆ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು ಎಂದು ನಿಯೋಗ ಆಗ್ರಹಿಸಿದೆ.