ನವೆಂಬರ್ ನಲ್ಲಿ ಪ್ರತಿದಿನ 2600 ಕ್ಯೂಸೆಕ್ಸ್, ಡಿಸೆಂಬರ್‌ನಲ್ಲಿ ಪ್ರತಿದಿನ 2,700 ಕ್ಯೂಸೆಕ್ಸ್ ಕಾವೇರಿ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಆದೇಶ
Update: 2023-11-23 16:59 IST
ಸಾಂದರ್ಭಿಕ ಚಿತ್ರ (Photo: PTI)
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡಿಗೆ ನವೆಂಬರ್ ತಿಂಗಳ ಉಳಿದ ದಿನಗಳಿಗೆ ಪ್ರತಿ ದಿನ 2600 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿಯು ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಕಾವೇರಿ ನೀರು ವಿವಾದ ಟ್ರಿಬ್ಯುನಲ್‌ನ ಅಂತಿಮ ಆದೇಶದಂತೆ ಡಿಸೆಂಬರ್ ತಿಂಗಳಿನಲ್ಲಿ ಪ್ರತಿ ದಿನ 2700 ಕ್ಯುಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸಮಿತಿ ಸೂಚಿಸಿದೆ.
ಇಂದು ಬೆಳಿಗ್ಗೆ 11.30ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಕರ್ನಾಟಕದ ಕಾವೇರಿ ನಿಗಮದ ಅಧಿಕಾರಿಗಳೂ ಉಪಸ್ಥಿತರಿದ್ದರು.