×
Ad

ಕರ್ನಾಟಕ ಬಂದ್ | ಬೆಂಗಳೂರು ನಗರದಲ್ಲಿ 785 ಮಂದಿ ಪೊಲೀಸ್‌ ವಶಕ್ಕೆ

Update: 2023-09-29 23:34 IST

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು, ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರು ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿತ್ತು. ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಸೆಕ್ಷನ್ 144ರ ಅಡಿ ನಿಯಮ ಮೀರಿ ಪ್ರತಿಭಟನೆ ನಡೆಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಲಯದ ಆದೇಶದಂತೆ ನಿಯಮ ಮೀರಿದ 785 ಜನರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ. ಫ್ರೀಡಂ ಪಾರ್ಕ್‍ನಲ್ಲಿ 1,500ಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ನಗರದಾದ್ಯಂತ ಶುಕ್ರವಾರ ಬೆಳಗ್ಗೆ ವಾಹನ ಸಂಚಾರ ವಿರಳವಾಗಿತ್ತು. ಸಂಜೆಯಿಂದ ಎಂದಿನಂತೆ ವಾಹನ ಸಂಚಾರ, ಜನ ಜೀವನ ಸಹಜ ಸ್ಥಿತಿಗೆ ಮರಳಿತು. ಒಟ್ಟಾರೆ ಬಂದ್ ಶಾಂತಿಯುತವಾಗಿ ಕೊನೆಗೊಂಡಿದೆ ಎಂದು ಬಿ.ದಯಾನಂದ್ ಹೇಳಿದರು.


 






 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News