×
Ad

ಕರ್ನಾಟಕ ಬಂದ್ | ಸ್ಯಾಂಡಲ್​ವುಡ್​ ನಟ-ನಟಿಯರಿಂದ ಪ್ರತಿಭಟನೆ

Update: 2023-09-29 15:27 IST

ಫೋಟೊ - twitter.com

ಬೆಂಗಳೂರು: ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್​ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ.

ಸ್ಯಾಂಡಲ್​ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಾಥ್​ ನೀಡಿದರು.

ಬೆಂಗಳೂರಿನ ಕರ್ನಾಟಕದ ಫಿಲ್ಮ್​ ಚೇಂಬರ್ ಸಮೀಪ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಚಿತ್ರರಂಗ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಚಿತ್ರರಂಗದ ಹಲವು ಕಲಾವಿದರು ಈ ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಉಪೇಂದ್ರ, ಶಿವರಾಜ್​ಕುಮಾರ್, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಉಮಾಶ್ರೀ ಮೊದಲಾದವರು ಭಾಗಿ ಆಗಿದ್ದರು. ಈ ವೇಳೆ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News