Karnataka Budget 2026 | ʻರೋಹಿತ್ ವೇಮುಲ ಕಾಯ್ದೆʼ ಜಾರಿ; 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ
ಅಲ್ಪಸಂಖ್ಯಾತ ನಿರ್ಗತಿಕರಿಗೆ ಎರಡು ವೃದ್ಧಾಶ್ರಮ ಸ್ಥಾಪನೆ
ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟೆಲ್ ನಿರ್ಮಾಣ
ಬೆಂಗಳೂರಿನ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ಜೈವಿಕ ಉದ್ಯಾನ ನಿರ್ಮಾಣ
ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ ಮಾಡಲಾಗುವುದು
ಬೆಂಗಳೂರು ಹೊರವಲಯದ ವಸತಿ ಪ್ರದೇಶಗಳಲ್ಲಿ ಸೆರೆಹಿಡಿದ ಚಿರತೆಗಳ ಪುನರ್ವಸತಿಗಾಗಿ ಬನ್ನೇರುಘಟ್ಟದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ
ಮಾನವ ವನ್ಯಜೀವಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆ, ಮುಂದಿನ ಐದು ವರ್ಷಗಳಲ್ಲಿ 1500 ಕೋಟಿ ರೂ ವೆಚ್ಚ
ವಿವಿಗಳಲ್ಲಿ ಜಾತಿ ದೌರ್ಜನ್ಯ ತಡೆಯಲು ʼರೋಹಿತ್ ವೇಮುಲ ಕಾಯ್ದೆʼ
ರಾಜ್ಯದ ಎಲ್ಲಾ ಸರಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.
1 ರಿಂದ 12 ರವರೆಗೆ ಎಐ ಆಧಾರಿತ ಕಲಿಕಾ ಸೌಲಭ್ಯ
ಹೊನ್ನಾಳಿ, ತೊರವಿಯಲ್ಲಿ ಕೃಷಿ ಮಾರುಕಟ್ಟೆ 64 ಕೋಟಿ ವೆಚ್ಚದಲ್ಲಿ ನಿರ್ಮಾಣ