ಸಿವಿಲ್ ಸೇವಾ ಹುದ್ದೆಗಳ ವಯೋಮಿತಿ ಸಡಿಲಿಕೆ?
Update: 2026-01-22 22:21 IST
ಮುಖ್ಯಮಂತ್ರಿ ಸಿದ್ದರಾಮಯ್ಯ (File Photo)
ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2027ರ ಡಿಸೆಂಬರ್ 31 ರವರೆಗೆ ಹೊರಡಿಸಲಾಗಿರುವ ಎಲ್ಲ ಅಧಿಸೂಚನೆಗಳಿಗೆ ಅನ್ವಯ ಆಗುವಂತೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸಾಮಾನ್ಯ ವರ್ಗಕ್ಕೆ ಸದ್ಯ ಈಗಿರುವ 35 ವರ್ಷದ ವಯೋಮಿತಿಯಿಂದ 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ. ಅದೇ ರೀತಿ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿಯಿಂದ 43 ವರ್ಷಗಳಿಗೆ ಅನ್ವಯವಾಗುವಂತೆ ವಿಸ್ತರಣೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.