×
Ad

ʼಕರ್ನಾಟಕ ಸಂಭ್ರಮʼ ನಮ್ಮ ಜಾತ್ರೆ ಜಾನಪದ ಸಂಭ್ರಮದ ಭವ್ಯ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Update: 2023-12-10 12:54 IST

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ಕರ್ನಾಟಕ ಸಂಭ್ರಮ-50ರ ಅಂಗವಾಗಿ, ಅನ್ ಬಾಕ್ಸಿಂಗ್ ಬೆಂಗಳೂರು ಇದರ ಭಾಗವಾಗಿ ಆಯೋಜಿಸಿದ ನಮ್ಮ ಜಾತ್ರೆ ಜಾನಪದ ಸಂಭ್ರಮದ ಭವ್ಯವಾದ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ, ನಿರ್ದೇಶಕಿ ಧರಣಿ ದೇವಿ ಮಾಲಗತ್ತಿ, ಚಲನಚಿತ್ರ ನಟರಾದ ಸಾಧು ಕೋಕಿಲ, ಪೂಜಾ ಗಾಂಧಿ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News