×
Ad

ತಮಿಳುನಾಡಿನ ಹೋರಾಟಕ್ಕೆ ಬೆಂಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2025-03-12 20:07 IST

Photo: X/@siddaramaiah

ಬೆಂಗಳೂರು: ‘ಕರ್ನಾಟಕ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರಕಾರದ ಎಲ್ಲಾ ನಡೆಗಳನ್ನೂ ಯಾವುದೇ ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ತಮಿಳುನಾಡಿನ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ. ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ನೇತೃತ್ವದ ನಿಯೋಗದೊಂದಿಗೆ ಭೇಟಿ ಮಾಡಿ ಕೇಂದ್ರ ಸರಕಾರದ ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಸಿಎಂ ಸಮಾಲೋಚನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಮತ್ತಿತರ ವಿಚಾರದಲ್ಲಿ ಕೇಂದ್ರದ ವಿರುದ್ಧ ಧ್ವನಿ ಎತ್ತುವಂತೆ ಹಾಗೂ ತಮಿಳುನಾಡು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವಂತೆ ಕೋರಿದ್ದಾರೆ. ಕೇಂದ್ರದ ವಿರುದ್ಧ ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮ ಬೆಂಬಲವೂ ಇದೆ ಎಂದು ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News