×
Ad

ಕರ್ನಾಟಕದ ಕ್ರಿಕೆಟಿಗ ಕೆ.ಹೊಯ್ಸಳ ಹೃದಯಾಘಾತದಿಂದ ನಿಧನ

Update: 2024-02-24 10:58 IST

K Hoysala | Photo: X

ಬೆಂಗಳೂರು: ಕರ್ನಾಟಕದ ಮಾಜಿ ಜೂನಿಯರ್ ಕ್ರಿಕೆಟಿಗ ಕೆ.ಹೊಯ್ಸಳ (34) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಇಲ್ಲಿನ ಆರ್ ಎಸ್ಐ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಐಎ ಮತ್ತು ಎಡಿ ಟೂರ್ನಿಯಲ್ಲಿ ತಮಿಳುನಾಡು ವಿರುದ್ಧದ ಪಂದ್ಯದ ನಂತರ ಅವರು ಮೈದಾನದಲ್ಲೇ ಕುಸಿದುಬಿದ್ದರು ಎಂದು ತಂಡದ ಸಿಬ್ಬಂದಿ ಒಬ್ಬರು ತಿಳಿಸಿದರು.

ಸ್ಥಳದಲ್ಲೇ ಸಿಪಿಆರ್ ನೀಡಿ ನಂತರ ಹತ್ತಿರದ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಹಾಗೂ ಮಧ್ಯಮ ವೇಗದ ಬೌಲರ್ ಆಗಿದ್ದ ಅವರು 25 ವರ್ಷದೊಳಗಿನವರ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಕೆಪಿಎಲ್ ಟೂರ್ನಿಯಲ್ಲೂ ಆಡಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News