×
Ad

ರಾಜ್ಯದಲ್ಲಿ 37,48,700 ವಸತಿ ರಹಿತರು: ಸಚಿವ ಝಮೀರ್ ಅಹ್ಮದ್

Update: 2025-12-10 18:51 IST

ಬೆಳಗಾವಿ (ಸುವರ್ಣವಿಧಾನಸೌಧ): ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಬುಧವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯ ಕೆ.ಶಿವಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 2018ರಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆ ಹಾಗೂ 2017ರಲ್ಲಿ ಪ್ರಧಾನ ಮಂತ್ರಿ ಆವಾಸ್(ನಗರ) ಯೋಜನೆಯಡಿ ನಗರ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟು 37,48,766 ವಸತಿ ರಹಿತರು ಕಂಡು ಬಂದಿದ್ದು, ಇದರಲ್ಲಿ 17,31,633 ನಿವೇಶನ ರಹಿತರು ಮತ್ತು 20,17,133 ವಸತಿ ರಹಿತರು ಇದ್ದಾರೆ ಎಂದು ವಿವರಿಸಿದರು.

2024-2025ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಒಟ್ಟು 7,38,881 ಮನೆಗಳ ಗುರಿ ನೀಡಿದ್ದು, ಇವುಗಳಲ್ಲಿ 3,27,747 ಅನುಮೋದನೆಗೊಂಡಿವೆ. 411134 ಮನೆಗಳು ಅನುಮೋದನೆಗೆ ಬಾಕಿಯಿವೆ. ರಾಜ್ಯದಲ್ಲಿ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 4 ಲಕ್ಷ ರೂ. ಮತ್ತು ಸಾಮಾನ್ಯ ವರ್ಗದವರಿಗೆ 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News