ಗಾಳಿ ಆಂಜನೇಯ ದೇವಸ್ಥಾನ ಮುಜರಾಯಿ ಇಲಾಖೆಗೆ ಪಡೆದ ವಿಚಾರ: ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
Update: 2025-07-16 19:18 IST
ಕರ್ನಾಟಕ ಹೈಕೋರ್ಟ್
ಬೆಂಗಳೂರು: ಪ್ರತಿಷ್ಠಿತ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ತೆಗೆದುಕೊಂಡು ಆದೇಶ ರದ್ದು ಕೋರಿ ಗಾಳಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ತ ಯಾದವ್ ಅವರಿದ್ದ ಏಕಸದಸ್ಯ ಪೀಠ ಆದೇಶಿದೆ.
ಗಾಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಮುಜರಾಯಿ ಇಲಾಖೆ ದೇಗುವನ್ನು ತನ್ನ ಸುಪರ್ದಿಗೆ ಪಡೆದಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪು ಎನ್ನಲು ಆಗದು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.