×
Ad

ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

Update: 2025-07-01 20:46 IST

ಕರ್ನಾಟಕ ಹೈಕೋರ್ಟ್ (Photo: PTI)

ಬೆಂಗಳೂರು: ಮಹರ್ಷಿ ವಾಲ್ಮಿಕಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐನಿಂದ ಸಮಗ್ರ ತನಿಖೆಗೆ ನೀಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಸಿಬಿಐನಿಂದ ಸಮಗ್ರ ತನಿಖೆ ಕೋರಿ ಅರವಿಂದ ಲಿಂಬಾವಳಿ, ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಅರ್ಜಿ ಸಲ್ಲಿಸಿದ್ದ ಅರ್ಜಿ‌ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸಲು ಎಸ್ಐಟಿಗೆ ಸೂಚನೆ ನೀಡಿ ಆದೇಶಿದೆ.

ಇಲ್ಲಿಯವರೆಗೆ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತ ತನಿಖೆ ನಡೆಸುತ್ತಿದ್ದ ಸಿಬಿಐ ಈಗ ಪ್ರಕರಣ ಎಲ್ಲ ಆಯಾಮಗಳಲ್ಲಿ ತನಿಖೆ ಅಸ್ತು ನೀಡಿದೆ.

ಇದೇ ವೇಳೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್​ ಬ್ಯಾಂಕ್​ ಆಫ್​ ಇಂಡಿಯಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್ ಮನವಿ ಮಾಡಿತ್ತು. ಆದರೆ, ಹೈಕೋರ್ಟ್​ ಈ ಮನವಿಯನ್ನು ತಿರಸ್ಕರಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News