ಕರ್ನಾಟಕ ವಿಧಾನಪರಿಷತ್‌ | 6 ಸ್ಥಾನಗಳಿಗೆ ಚುನಾವಣೆ ಘೋಷಣೆ

Update: 2024-05-02 14:05 GMT

ಸಾಂದರ್ಭಿಕ ಚಿತ್ರ | PC : PTI 

ಬೆಂಗಳೂರು : ಲೋಕಸಭಾ ಚುನಾವಣೆಯ ಬೆನ್ನಲ್ಲೆ ರಾಜ್ಯದಲ್ಲಿ ಸದ್ಯದಲ್ಲೇ ತೆರವಾಗಲಿರುವ ವಿಧಾನ ಪರಿಷತ್ ಆರು ಸ್ಥಾನಗಳಿಗೆ ಜೂನ್ 3ಕ್ಕೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ನೈರುತ್ಯ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ್, ಈಶಾನ್ಯ ಪದವೀಧರರ ಕ್ಷೇತ್ರದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಬೆಂಗಳೂರು ಪದವೀಧರರ ಕ್ಷೇತ್ರದ ಅ.ದೇವೇಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರದ ವೈ.ಎ.ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಭೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ರ ಅವಧಿ ಇದೇ ವರ್ಷ ಜೂನ್ 21ಕ್ಕೆ ಕೊನೆಗೊಳ್ಳಲಿದೆ.

ಆ ಹಿನ್ನೆಲೆಯಲ್ಲಿ ಮೇಲ್ಕಂಡ ವಿಧಾನ ಪರಿಷತ್ತಿನ ಆರು ಕ್ಷೇತ್ರಗಳಿಗೆ ವೇಳಾಪಟ್ಟಿ ಪ್ರಕಟಿಸಿದ್ದು, 2024ರ ಮೇ 9ಕ್ಕೆ ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮೇ 17ಕ್ಕೆ ನಾಮಪತ್ರ ಪರಿಶೀಲನೆ, ಮೇ 20ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಜೂನ್ 3ರ ಬೆಳಗ್ಗೆ 8ಗಂಟೆಯಿಂದ ಸಂಜೆ 4ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಜೂನ್ 6ಕ್ಕೆ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ಜೂನ್ 12ರ ಒಳಗಾಗಿ ಚುನಾವಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News