×
Ad

ಜು.9ರ ವರೆಗೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಅಲರ್ಟ್

Update: 2026-07-04 23:06 IST

ಸಾಂದರ್ಭಿಕ ಚಿತ್ರ 

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಹವಾಮಾನ ಇಲಾಖೆಯು ಜು.9ರ ವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಹಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕಡಲತೀರದಲ್ಲಿ ವಾಸಿಸುತ್ತಿರುವವರು, ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಈ ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇನ್ನು ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News