ಶಕ್ತಿ ಯೋಜನೆಗೆ ಎರಡು ವರ್ಷ: ಸರಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ 474 ಕೋಟಿ ಮಹಿಳಾ ಪ್ರಯಾಣಿಕರು
ಸಾಂದರ್ಭಿಕ ಚಿತ್ರ
ಬೆಂಗಳೂರು: ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಜಾರಿ ಮಾಡಿರುವ ಶಕ್ತಿ ಯೋಜನೆಗೆ ಎರಡು ವರ್ಷಗಳಾಗಿದ್ದು, ಜಾರಿಯಾದ ದಿನದಿಂದ ಇಲ್ಲಿಯವರೆಗೆ 474 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
2023, ಜೂ.11ರಿಂದ ರಾಜ್ಯ ಸರಕಾರವು ಶಕ್ತಿ ಯೋಜನೆಯನ್ನು ಅನುಷ್ಟಾನ ಮಾಡಿದೆ. ಯೋಜನೆಯಡಿ ಇದುವರೆಗೂ 474,82,49,843 ಮಹಿಳಾ ಪ್ರಯಾಣಿಕರು ಸರಕಾರದ ನಾಲ್ಕು ನಿಗಮಗಳ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದು, 11,994 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಟಿಕೇಟ್ ಅನ್ನು ಮಹಿಳೆಯರಿಗೆ ಉಚಿತವಾಗಿ ವಿತರಣೆ ಮಾಡಲಾಗಿದೆ.
ಎರಡು ವರ್ಷಗಳಲ್ಲಿ ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ 144,23,83,328 ಮಹಿಳೆಯರು, ಬಿಎಂಟಿಸಿ ಬಸ್‍ಗಳಲ್ಲಿ 150,69,56,654 ಮಹಿಳೆಯರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ 111,10,24,350 ಮಹಿಳೆಯರು ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‍ಗಳಲ್ಲಿ 68,78,85,511 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.