×
Ad

ಕಾವೇರಿ 2.0 ತಂತ್ರಾಂಶ ಹ್ಯಾಕ್ : ಎಫ್‍ಐಆರ್ ದಾಖಲು

Update: 2025-02-08 21:17 IST

ಬೆಂಗಳೂರು : ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಂದಾಯ ಇಲಾಖೆಯ ಕಾವೇರಿ-2.0 ತಂತ್ರಾಂಶವನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ನೋಂದಣಿ ಮಹಾ ನಿರೀಕ್ಷಕ(ಐಜಿಆರ್) ಕೆ.ಎ.ದಯಾನಂದ ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಇಲ್ಲಿನ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

ಸರ್ವರ್ ಸಮಸ್ಯೆಯಿಂದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಐಜಿಆರ್ ಪರಿಶೀಲಿಸಿದಾಗ ದುರುದ್ದೇಶದಿಂದ ಅಪರಿಚಿತರು ಕಾವೇರಿ 2.0 ತಂತ್ರಾಂಶವನ್ನು ಹ್ಯಾಕ್ ಮಾಡಿ, ವೆಬ್‍ಸೈಟ್ ಪ್ರವೇಶಿಸಿ ಅದರಲ್ಲಿರುವ ಡೇಟಾಗಳನ್ನು ಕಳವು ಮಾಡಲು ನಕಲಿ ಖಾತೆಗಳನ್ನು ತೆರೆದಿರುವುದು ಪತ್ತೆಯಾಗಿದೆ.

ವೆಬ್‍ಸೈಟ್ ಹ್ಯಾಕ್ ಮಾಡಿದ ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆ.ಎ.ದಯಾನಂದ್ ದೂರಿನಲ್ಲಿ ಕೋರಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಸಿಇಎನ್ ಠಾಣೆ ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News