×
Ad

ಕಾವೇರಿ 5ನೇ ಹಂತದ ಯೋಜನೆ | ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ : ಡಿ.ಕೆ.ಶಿವಕುಮಾರ್

Update: 2024-10-12 17:34 IST

ಬೆಂಗಳೂರು : ಕಾವೇರಿ ಐದನೆ ಹಂತದ ಕುಡಿಯುವ ನೀರಿನ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲವಾಗಲಿದೆ. ಇದೇ ತಿಂಗಳ 16ರಂದು ಯೋಜನೆ ಜಾರಿಯಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾವೇರಿ ಕುಡಿಯುವ ನೀರಿನ ಐದನೇ ಹಂತದ ಯೋಜನೆ ಜಾರಿಯಾಗುತ್ತಿದೆ. ಇಷ್ಟು ದಿನ ಬೆಂಗಳೂರಿಗೆ ನಾಲ್ಕು ಹಂತಗಳ ಯೋಜನೆಯಲ್ಲಿ ಕುಡಿಯುವ ನೀರನ್ನು ಪೂರೈಸಲಾಗುತ್ತಿತ್ತು. ಈ ಯೋಜನೆ ಜಾರಿಗೆ ಇದ್ದ ಅಡಚಣೆ ನಿವಾರಿಸಿಕೊಂಡು ಬಂದಿದ್ದು, ಅ.16ಕ್ಕೆ ತೊರೆಕಾಡನಹಳ್ಳಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು. ನಂತರ ಮನೆ-ಮನೆಗೆ ಕಾವೇರಿ ಪೂರೈಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News