×
Ad

ಕಾವೇರಿ ಹೋರಾಟ | ಯಡಿಯೂರಪ್ಪ, ಬೊಮ್ಮಾಯಿ ಸೇರಿ ಹಲವರು ಪೊಲೀಸ್ ವಶಕ್ಕೆ

Update: 2023-09-23 12:39 IST

ಬೆಂಗಳೂರು, ಸೆ.23: ರಾಜ್ಯ ಸರ್ಕಾರ ನೆರೆಯ ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡಿದ್ದು, ಇದರ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ರಸ್ತೆತಡೆಗೆ ಮುಂದಾದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ನಗರದಲ್ಲಿಂದು ಮೈಸೂರು ಬ್ಯಾಂಕ್ ವೃತ್ತದ ಬಳಿ ಬಿಜೆಪಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಸ್ತೆ ತಡೆಗೆ ಮುಂದಾದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಪರಿಷತ್ತು ಸದಸ್ಯ ನಾರಾಯಣಸ್ವಾಮಿ ಸೇರಿದಂತೆ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದುರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News