ಕೆಸೆಟ್- 25: ತಿದ್ದುಪಡಿಗೆ ಅ.6 ಕಡೆಯ ದಿನ
Update: 2025-10-04 19:32 IST
ಬೆಂಗಳೂರು, ಅ.4: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025ಕ್ಕೆ(ಕೆಸೆಟ್ 25) ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ವಿವರಗಳನ್ನು ತಿದ್ದುಪಡಿ ಮಾಡಲು ಅ.6ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ.
ಮೊಬೈಲ್ ದೂರವಾಣಿ ಸಂಖ್ಯೆ ಹೊರತುಪಡಿಸಿ, ಆನ್ ಲೈನ್ ಅರ್ಜಿಯಲ್ಲಿನ ಎಲ್ಲ ವಿವರಗಳ ತಿದ್ದುಪಡಿಗೂ ಅವಕಾಶ ನೀಡಲಾಗಿದೆ. ಒಂದು ವೇಳೆ ದೂರವಾಣಿ ಸಂಖ್ಯೆ ಬದಲಿಸಿಕೊಳ್ಳಬೇಕು ಎವವರು ಖುದ್ದು ಕೆಇಎಗೆ ಬಂದು ಅರ್ಜಿ ಕೊಡಬೇಕು.
ಒಮ್ಮೆ ತಿದ್ದುಪಡಿ ಮಾಡಿದ ನಂತರ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಎಚ್ಚರ ವಹಿಸಲು ಅವರು ಸಲಹೆ ನೀಡಿದ್ದಾರೆ. ಪುನಃ ತಿದ್ದುಪಡಿ ಸಂಬಂಧ ಯಾವುದೇ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ಎಚ್.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.