×
Ad

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಮಹಾರಾಷ್ಟ್ರದಲ್ಲಿ ಆರ್.ಡಿ ಪಾಟೀಲ್ ಬಂಧನ

Update: 2023-11-10 17:37 IST

ಕಲಬುರಗಿ: ಕೆಇಎ ನೇಮಕಾತಿಯಲ್ಲಿ ಆಕ್ರಮ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಆರ್.ಡಿ ಪಾಟೀಲ್ ನನ್ನು ಮಹಾರಾಷ್ಟ್ರದಲ್ಲಿ ಕಲಬುರಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಿಂದ ಕಲಬುರಗಿಗೆ ಬರುತ್ತಿರುವ ವೇಳೆ ಆರ್.ಡಿ ಪಾಟೀಲ್ ನನ್ನು ಬಂಧಿಸಿರುವ ಪೊಲೀಸರು ಇದೀಗ ಕಲಬುರಗಿಗೆ ಕರೆತರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಆರೋಪಿ ಆರ್.ಡಿ ಪಾಟೀಲ್ ಕಲಬುರಗಿಯ ವರ್ಧಾ ನಗರದಲ್ಲಿರುವ ಫ್ಲಾಟ್ ಒಂದರಲ್ಲಿ ಅಡಗಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದ್ದರು. ಆದರೆ, ಪೊಲೀಸರು ಬರುತ್ತಿದ್ದಂತೆ ಆತ ಫ್ಲಾಟ್ ನ ಕಾಂಪೌಂಡ್ ಮೇಲಿಂದ ಹಾರಿ ಪರಾರಿಯಾಗಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.  

ಸಂಬಂಧಿಕರ ಮನೆಯಲ್ಲಿದ್ದ ಆರೋಪಿಯು ಅಲ್ಲಿಂದಲೇ ಕಲಬುರಗಿಯಲ್ಲಿರುವ ಕರ್ನಾಟಕ ಹೈಕೋರ್ಟ್ ಪೀಠಕ್ಕೆ  ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ನ. 10ರಂದು ಆತನ ಜಾಮೀನು ಅರ್ಜಿಯನ್ನು ವಿಚಾರಣೆಗೊಳಪಡಿಸಿದ್ದ ಪೀಠ, ವಿಚಾರಣೆಯನ್ನು ಮುಂದೂಡಿತ್ತು. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News