×
Ad

ಕೆರೆಗೋಡು ಧ್ವಜ ವಿವಾದ : ಬೆಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ, ಹಲವರು ವಶಕ್ಕೆ

Update: 2024-01-29 11:54 IST

ಬೆಂಗಳೂರು: ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಕೇಸರಿ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಇದೇ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ವಿಧಾನ ಪರಿಷತ್ತಿನ ಸದಸ್ಯೆ ಡಾ. ತೇಜಸ್ವಿನಿ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರ ಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News