×
Ad

ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆ | ಅಕ್ಕಿ, ರಾಗಿ, ಜೋಳ ಗುಣಮಟ್ಟದಿಂದ ಕೂಡಿರಬೇಕು : ಕೆ.ಎಚ್.ಮುನಿಯಪ್ಪ

Update: 2024-06-24 18:28 IST

Photo :x/@KHMuniyappaklr

ಬೆಂಗಳೂರು : ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ, ರಾಗಿ, ಜೋಳ ಗುಣಮಟ್ಟದಿಂದ ಕೂಡಿರಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ನಗರದಲ್ಲಿರುವ ಆಹಾರ ನಿಗಮದ ಕಚೇರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನೆನಡೆಸಿದ ಅವರು, ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ನಾಗರಿಕರಿಗೆ ಉತ್ತಮ ಸೇವೆ ಒದಗಿಸುವಂತೆ ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಹಣವು ಪ್ರತಿ ತಿಂಗಳ ಅಂತ್ಯದ ಒಳಗೆ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳುಬೇಕು. ವಿತರಣೆಗೆ ಬಾಕಿಯಿರುವ ಎಪಿಎಲ್, ಬಿಪಿಎಲ್ ಕಾರ್ಡುಗಳನ್ನು ಗುರುತಿಸಿ ಆದಷ್ಟು ಶೀಘ್ರ ವಿಲೇವಾರಿ ಮಾಡುವಂತೆ ಅವರು ಹೇಳಿದರು.

ಪಡಿತರ ದಾಸ್ತಾನು ಇಡುವಂತಹ ಗೋದಾಮುಗಳಲ್ಲಿ ಶುಚಿತ್ವ ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳನ್ನು ಪಡಿತರ ಚೀಟಿದಾರರಿಗೆ ಸರಬರಾಜು ಮಾಡಬೇಕು ಎಂದು ಮುನಿಯಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸರಕಾರದ ಕಾರ್ಯದರ್ಶಿ ರಮಣದೀಪ್ ಚೌಧರಿ, ಆಯುಕ್ತರಾದ ವಾಸಿ ರೆಡ್ಡಿ ವಿಜಯ ಜೋತ್ಸ್ನ, ಆಹಾರ ನಿಗಮ ನಿರ್ದೇಶಕ ಚಂದ್ರಕಾಂತ್, ಕಾನೂನು ಮಾಪನ ಇಲಾಖೆ ನಿಯಂತ್ರಕಿ ಅನಿತಾ ಲಕ್ಷ್ಮಿ, ಆಹಾರ ಆಯೋಗದ ಕಾರ್ಯದರ್ಶಿ ಸುಜಾತಾ ಹೊಸಮನಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News