ಸಾಂದರ್ಭಿಕ ಚಿತ್ರ

ಬೆಂಗಳೂರು : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ವಾಕರಾರಸ) ಹೆಸರನ್ನು ಇನ್ನೂ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ಮರು ನಾಮಕರಣ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಶುಕ್ರವಾರ ಸಾರಿಗೆ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್. ಆದೇಶ ಹೊರಡಿಸಿದ್ದು, ಅ.29ರ ಸಂಪುಟ ಸಭೆ ತೀರ್ಮಾನದ ಅನ್ವಯ ಮೇಲ್ಕಂಡ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರ ಕೋರಿಕೆಯ ಮೇಲೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ‘ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor