×
Ad

ಪ್ರತಿದಿನ 1 ಕೋಟಿ ಲೀ.ಹಾಲು ಉತ್ಪಾದನೆಯು KMF ಇತಿಹಾಸದಲ್ಲಿಯೇ ಮೈಲಿಗಲ್ಲು : ಸಿಎಂ ಸಿದ್ದರಾಮಯ್ಯ

Update: 2024-07-02 17:00 IST

ಬೆಂಗಳೂರು : ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಅವರು ಇಂದು KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋವಿಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

"ರಾಜ್ಯದಲ್ಲಿ ಸುಮಾರು 16000 ಹಾಲಿನ ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ.15 ಮದರ್ ಡೈರಿಗಳಿವೆ. ಒಂದು ಕೋಟಿ  ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2.00 ರೂ. ಹೆಚ್ಚಿಸಲಾಗಿದೆ" ಎಂದರು.

ವಿಪಕ್ಷದ ಅಪಪ್ರಚಾರ :

ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News