×
Ad

ಪವರ್ ಸೆಂಟರ್​​ಗಳು ಹೆಚ್ಚಾಗಿವೆ, ಸೆಪ್ಟೆಂಬರ್ ನಂತರ ಬದಲಾವಣೆ ಆಗಲಿದೆ : ಕೆ.ಎನ್.ರಾಜಣ್ಣ

Update: 2025-06-26 17:34 IST

ಕೆ.ಎನ್.ರಾಜಣ್ಣ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರದ ಪವರ್ ಸೆಂಟರ್​ಗಳು ಹೆಚ್ಚಾಗಿವೆ. ಹೀಗಾಗಿ ಜಂಜಾಟಗಳು ಹೆಚ್ಚಾಗಿವೆ. ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ನಂತರ ಭಾರೀ ಬದಲಾವಣೆ ಆಗಲಿದೆ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2013ರಿಂದ 2018ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಈಗ ಒಂದು ಎರಡು ಮೂರು ಹೀಗೆ ಹಲವು ಪವರ್ ಸೆಂಟರ್‌ಗಿಳಿವೆ. 2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವ ಒತ್ತಡವೂ ಇರಲಿಲ್ಲ. ಪವರ್ ಸೆಂಟರ್ ಹೆಚ್ಚಾಗಿ ಸಿಎಂಗೆ ಜಂಜಾಟ ಹೆಚ್ಚಾಗಿದೆ’ ಎಂದರು.

ಗ್ಯಾರಂಟಿಯಿಂದ ಆರ್ಥಿಕ ಹೊರೆಯಾಗಿದೆ. ಆದರೆ ಹಣಕಾಸಿನ ಮುಗ್ಗಟ್ಟಿಲ್ಲ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದಾರೆ. ಹಣ ಇಲ್ಲದೇ ಇದ್ದರೆ ಈ ರೀತಿ ಕಾಮಗಾರಿ ಆರಂಭಿಸಲು ಸಾಧ್ಯವೇ?. ಶಾಸಕರ ನಿರೀಕ್ಷೆಗೆ ಅನುಗುಣವಾಗಿ ಅನುದಾನ ಸಿಗದೇ ಇರಬಹುದು. ಆದರೆ ಸಿಎಂ ಎಲ್ಲಾ ಶಾಸಕರ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News