×
Ad

ಕೊಡಗು ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣ: ಜು.18 ರಂದು ಲೋಕಾಯುಕ್ತ ಕಾರ್ಯಪಾಲಕ ಅಭಿಯಂತರರಿಂದ ಪರಿಶೀಲನೆ

Update: 2023-07-13 17:49 IST

ಮಡಿಕೇರಿಜು.13 : ಜಿಲ್ಲಾಧಿಕಾರಿ ಕಚೇರಿ ತಡೆಗೋಡೆಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.18 ಮತ್ತು 19 ರಂದು ಕರ್ನಾಟಕ ಲೋಕಾಯುಕ್ತದ ಕಾರ್ಯಪಾಲಕ ಅಭಿಯಂತರರಾದ ಆರ್.ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಕಾಮಗಾರಿ ಕಳಪೆ ಎಂದು ಆರೋಪಿಸಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕಿರಿಯ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ದೂರಿಗೆ ಸಂಬಂಧಿಸಿದಂತೆ ಜು.18 ಮತ್ತು 19 ರಂದು ಲೋಕಾಯುಕ್ತ ತನಿಖಾಧಿಕಾರಿಗಳಾದ ಕಾರ್ಯಪಾಲಕ ಅಭಿಯಂತರ ಆರ್.ರವಿಶಂಕರ್ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಲೋಕಯುಕ್ತದಿಂದ ಪ್ರಕರಣದ ತನಿಖೆ ನಡೆಯಲಿದ್ದು, ಈ ಸಂಬಂಧ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಕೂಡ ಶ್ರಮವಹಿಸಿದ್ದಾರೆ ಎಂದು ತೆನ್ನಿರ ಮೈನಾ ತಿಳಿಸಿದ್ದಾರೆ. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News