×
Ad

ಕೊಡಗು: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಮೃತ್ಯು

Update: 2023-08-06 17:34 IST

ಮೃತ ಪೊಲೀಸ್ ಸಿಬ್ಬಂದಿ

ಮಡಿಕೇರಿ ಆ.6 : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‍ಬೈಲ್ ನಲ್ಲಿ ನಡೆದಿದೆ.

ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ಪೊಲೀಸ್ ಸಿಬ್ಬಂದಿ ಎಂದು ತಿಳಿದು ಬಂದಿದೆ. 

ತಮ್ಮ ತೋಟದಲ್ಲಿ ಮಾವಿನ ಮರ ಏರಿ ಅದರ ಕೊಂಬೆಗೆ ಕಸಿ ಮಾಡುವ ಸಂದರ್ಭ ರಕ್ತದೊತ್ತಡ ಕಡಿಮೆಯಾಗಿ 50 ಅಡಿ ಎತ್ತರದಿಂದ ನೆಲಕ್ಕೆ ಬಿದ್ದದ್ದಾರೆನ್ನಲಾಗಿದೆ. ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರು ಆ ವೇಳೆಗೆ ಅವರು ಮೃತಪಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತ ಲೋಕೇಶ್ ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯಾಗಿದ್ದ ಲೋಕೇಶ್ ಕಳೆದ 15 ವರ್ಷಗಳ ಕಾಲ ಅಪ್ಪಚ್ಚು ರಂಜನ್ ಅವರ ಗನ್‍ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈ ಘಟನೆ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಲೋಕೇಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಆಗಮಿಸಿದ ಮಾಜಿ ಶಾಸಕರುಗಳಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಕಂಬನಿ ಮಿಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News