×
Ad

ಕೋಲಾರ: ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ; ಮೂವರು ಗಂಭೀರ

Update: 2023-11-14 15:28 IST

 ಕೋಲಾರ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದು, ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ  ಘಟನೆ  ಶ್ರೀನಿವಾಸಪುರ ತಾಲ್ಲೂಕಿನ ಶಿಗೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯಲ್ದೂರು ಶೀಗೆಹಳ್ಳಿ ಗ್ರಾಮದ ಬಾಬು ಎಂಬಾತ  ಹಲ್ಲೆ ನಡೆಸಿದ ಆರೋಪಿ ಎಂದು ತಿಳಿದು ಬಂದಿದೆ.

 ಬಾಬು ಮತ್ತು ಪವನ್ ನಡುವೆ ಗಲಾಟೆ ನಡೆದಿದ್ದು ಗಲಾಟೆ ಬಿಡಿಸಲು ಹೋದ ಪವನ್ ನ ಅಣ್ಣ ಮೋಹನ್ ಹಾಗೂ ರವಿ  ಎಂಬಾತನ ಮೇಲೂ  ಬಾಬು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಮೂವರು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News