×
Ad

ಕೋಲಾರ: ಪತಿಯಿಂದ ಪತ್ನಿಯ ಬರ್ಬರ ಕೊಲೆ

Update: 2024-02-15 10:38 IST

ಕೋಲಾರ, ಫೆ.15: ಪತಿಯೇ ಪತ್ನಿಯನ್ನು ಮಾರಕಾಯುಧದಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದಲ್ಲಿ ಬುಧವಾರ ಸಂಜೆ ನಡೆದಿದೆ.

ಕೆಜಿಎಫ್ ನಗರದ ಕೆಜಿಎಫ್ ನ ಸಂಜಯ್ ಗಾಂಧಿ ನಗರ ನಿವಾಸಿ ಪವಿತ್ರಾ(36) ಕೊಲೆಯಾದ ಗೃಹಿಣಿ. ಈಕೆಯ ಪತಿ ಲೋಕೇಶ್ ಕೊಲೆ ಆರೋಪಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾರ್ಥ್ ಟ್ಯಾನ್ ಬ್ಲಾಕ್ ನಲ್ಲಿ ವಾಸವಿದ್ದ ಲೊಕೇಶ್ ಹಾಗೂ ಪವಿತ್ರಾ ಸಂಬಂಧ ಇತ್ತೀಚೆಗೆ ಹದಗೆಟ್ಟಿತ್ತು. ಇವರೊಳಗಿನ ತಕರಾರು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು, ಇತ್ತೀಚೆಗೆ ಊರಿಗಾಂ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ಕೂಡ ದಾಖಲಾಗಿತ್ತು.

ಬುಧವಾರ ಸಂಜೆ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಪವಿತ್ರಾರಿಗೆ ಕೆಜಿಎಫ್ ನಗರದ ಕೋರಮಂಡಲ್ ಬಳಿ ಆರೋಪಿ ಪತಿ ಲೋಕೇಶ್ ಚೂರಿಯಿಂದ ಮಾರಣಾಂತಿಕವಾಗಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರಾವಸ್ಥೆಯಲ್ಲಿ ಬಿದ್ದಿದ್ದ ಪವಿತ್ರಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಊರಿಗಾಂ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News