×
Ad

ಕೋಲಾರ: ಲಾಕಪ್ ಡೆತ್ ಪ್ರಕರಣ; ಪಿಎಸ್ ಐ ಸಹಿತ ಇಬ್ಬರು ಪೇದೆಗಳ ವಿರುದ್ದ ಎಫ್ ಐಆರ್

Update: 2023-11-28 13:29 IST

ಕೋಲಾರ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ನಂಗಲಿ ಪೊಲೀಸ್ ಠಾಣೆಯ ಪಿ ಎಸ್ ಐ ಹಾಗೂ ಇಬ್ಬರು ಪೇದೆಗಳ ವಿರುದ್ದ ಎಫ್ ಐಆರ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್‌ ಠಾಣೆಯಲ್ಲಿ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಸೆಪ್ಟೆಂಬರ್‌ 17 ರಂದು ಮುನಿರಾಜು ಹಾಗೂ ಬಾಲಾಜಿ ಎಂಬ ಇಬ್ಬರು ಅರೋಪಿಗಳನ್ನು ಕರೆತಂದು ಸುಮಾರು 15 ದಿನಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಪೊಲೀಸ್‌ ಠಾಣೆ ಹಾಗೂ ಇತರ ಬೇರೆ ಸ್ಥಳಗಳಲ್ಲಿ ವಿಚಾರಣೆ ನಡೆಸುತ್ತಿರುವ ಮಧ್ಯೆ ಆರೋಪಿ ಆಂದ್ರಪ್ರದೇಶದ ಮದನಪಲ್ಲಿ ನಿವಾಸಿ ಮುನಿರಾಜು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದ.

ಘಟನೆಗೆ ಸಂಬಂಧಿಸಿ ನಂಗಲಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಪೇದೆಗಳಾದ ಮಂಜುನಾಥ್ ಮತ್ತು ಮಹಾಂತೇಶ್ ಪೂಜಾರಿ ಎಂಬುವರನ್ನು ಅಮಾನತು ಮಾಡಲಾಗಿತ್ತು.

ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಅರೋಪಿಗಳನ್ನು ವಿಚಾರಣೆ ಮಾಡಿ, ಕರ್ತವ್ಯಲೋಪ ಎಸಗಿರುವ  ಆರೋಪದಲ್ಲಿ ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್ ಅವರ ವರದಿ ಆಧರಿಸಿ ಅಮಾನತು ಮಾಡಿ ಕೋಲಾರ ಎಸ್ಪಿ ನಾರಾಯಣ ಆದೇಶಿಸಿದ್ದರು.




Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News