×
Ad

ಕೋಲಾರ: ಕಲುಶಿತ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Update: 2023-11-28 12:17 IST

ಕೋಲಾರ: ಕಲುಶಿತ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡಪನ್ನಾಂಡಹಳ್ಳಿಯಲ್ಲಿ ನಡೆದಿದೆ.

ದೊಡ್ಡಪನ್ನಾಂಡಹಳ್ಳಿಯ ಸಮಾಜಕಲ್ಯಾಣ ಇಲಾಖೆಗೆ ಒಳಪಡುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ವಿಷ ಮಿಶ್ರಣ ಮಾಡಿರುವ ಬಗ್ಗೆ ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ.

ಅಸ್ವಸ್ಥರಾಗಿದ್ದ ಮಕ್ಕಳಿಗೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೃತ್ಯ ಎಸಗಿದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News