×
Ad

ಕೊಪ್ಪ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Update: 2023-08-23 10:44 IST

ಶ್ರೀನಿವಾಸ್ - ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ 

ಚಿಕ್ಕಮಗಳೂರು, ಆ.23: ಖಾಸಗಿ ಶಾಲೆಯ ವಸತಿ ನಿಲಯದ ಕೊಠಡಿಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಬುಧವಾರ ವರದಿಯಾಗಿದೆ.

ಕೊಪ್ಪ ಪಟ್ಟಣ ಸಮೀಪದಲ್ಲಿರುವ ಬಿಜಿಎಸ್ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸ್(15) ಶಾಲೆಯ ಹಾಸ್ಟೆಲ್‍ನ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಾಲಕನ ಸಾವಿಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಬಾಲಕ ಶ್ರೀನಿವಾಸ್ ಕಡೂರು ತಾಲೂಕಿನಲ್ಲಿ ಗ್ರಾಮ ಲೆಕ್ಕಿಗರಾಗಿರುವ ರಮೇಶಪ್ಪ ಎಂಬವರ ಪುತ್ರನಾಗಿದ್ದು, ಮಂಗಳವಾರ ರಾತ್ರಿ ತನ್ನ ಕೊಠಡಿಯ ಎಲ್ಲ ವಿದ್ಯಾರ್ಥಿಗಳು ನಿದ್ದೆಗೆ ಜಾರಿದ ಮೇಲೆ ಮಧ್ಯ ರಾತ್ರಿ ವೇಳೆ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.

ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆ ಬಳಿಕ ಬಾಲಕನ ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬರಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News